-->
Bookmark

Chennai : ತಮಿಳುನಾಡಿನಲ್ಲಿ ಧಾರಾಕಾರ ಮಳೆ : ಜನ ಜೀವನ ಅಸ್ತವ್ಯಸ್ಥ

ತಮಿಳುನಾಡಿನಲ್ಲಿ ಧಾರಾಕಾರ ಮಳೆ : ಜನ ಜೀವನ ಅಸ್ತವ್ಯಸ್ಥ

ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಇಂದು (ಸೋಮವಾರ) ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್ ಸೇರಿದಂತೆ ವೆಲ್ಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯಿಂದಾಗಿ ಚೆನ್ನೈಗೆ ತೆರಳುತ್ತಿದ್ದ ಆರಕ್ಕೂ ಹೆಚ್ಚು ವಿಮಾನಗಳನ್ನು ಬೆಂಗಳೂರಿಗೆ ಮಾರ್ಗ ಬದಲಿಸಲಾಗಿದೆ. ಜತೆಗೆ, 12ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಚೆನ್ನೈನ ಮೀನಂಬಾಕ್ಕಂನಲ್ಲಿ ಇಂದು ಮುಂಜಾನೆ 5.30ರವರೆಗೆ 13.7 ಸೆಂ.ಮೀ ಮಳೆಯಾಗಿದೆ.

ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Post a Comment

Post a Comment