ಮುಂದಿನ ತಿಂಗಳಿನಿಂದ ಬಿಲ್ ಬರಲ್ಲ - ಉಪ ಮುಖ್ಯಮಂತ್ರಿ ಡಿಕೆಶಿ
ಬೆಂಗಳೂರು :
ರಾಜ್ಯ ಸರ್ಕಾರದ 'ಗ್ಯಾರಂಟಿ' ಯೋಜನೆಗಳ ಪೈಕಿ ಒಂದಾದ `ಗೃಹ ಜ್ಯೋತಿ'ಗೆ ಅರ್ಜಿ ಸಲ್ಲಿಸಲು ನಾಗರಿಕರು ಧಾವಂತಪಡಬೇಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೋಮವಾರ ಸಲಹೆ ನೀಡಿದ್ದಾರೆ.
ಗೃಹಬಳಕೆ ಗ್ರಾಹಕರಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಆದೇಶ ಹೊರಡಿಸಿದೆ. ನಿಗದಿತ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಭಾನುವಾರದಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಹಲವು ಜಿಲ್ಲೆಗಳಲ್ಲಿ ಸರ್ವ ಸಮಸ್ಯೆಯಿಂದ ಅರ್ಜಿ ಸಲ್ಲಿಕೆಗೆ ತೊಡಕಾಗಿತ್ತು.
ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಟ್ವಿಟ್ ಮಾಡಿದ್ದಾರೆ.
`ಗೃಹ ಜ್ಯೋತಿ ಸೌಲಭ್ಯ ಸಿಗುತ್ತೋ ಇಲ್ಲವೋ ಎಂದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷವು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ. ಯೋಜನೆಯನ್ನು ಜಾರಿಗೆ ತಂದೇ ತರುತ್ತೇವೆ. ಅರ್ಜಿ ಸಲ್ಲಿಸಲು ನೂಕು ನುಗ್ಗಲಿನಲ್ಲಿ ತೆರಳುವ ಅವಶ್ಯಕತೆಯಿಲ್ಲ. ಮುಂದಿನ ತಿಂಗಳಿನಿಂದ ನಿಮಗೆ ವಿದ್ಯುತ್ ಬಿಲ್ ಬರುವುದಿಲ್ಲ. ಆದರೆ ನೀವು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ನಮ್ಮ ಇಂಧನ ಸಚಿವರು ತಮಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ತಪ್ಪದೇ ಅರ್ಜಿ ಸಲ್ಲಿಸಿ, ಆತಂಕ ಪಡಬೇಡಿ' ಎಂದು ಗೊಂದಲ ನಿವಾರಿಸುವ ಕೆಲಸ ಮಾಡಿದ್ದಾರೆ.
(ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್) ಅಥವಾ
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರ, ಗ್ರಾಮ ಪಂಚಾಯಿತಿ, ನಾಡಕಚೇರಿ ಅಥವಾ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ಸ್ಥಳೀಯ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
Post a Comment