-->
Bookmark

Hubli : ಮೇಯರ್, ಉಪಮೇಯರ್ ಚುನಾವಣೆ : ಬಿಜೆಪಿ ಅಭ್ಯರ್ಥಿ ಕೇಸರಿ ಶಾಲು : ಕಾಂಗ್ರೆಸ್ ಆಕ್ಷೇಪ

ಮೇಯರ್, ಉಪಮೇಯರ್ ಚುನಾವಣೆ : ಬಿಜೆಪಿ ಅಭ್ಯರ್ಥಿ ಕೇಸರಿ ಶಾಲು : ಕಾಂಗ್ರೆಸ್ ಆಕ್ಷೇಪ 

ಹುಬ್ಬಳ್ಳಿ : 
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಉಪಮೇಯರ್‌ ಅಭ್ಯರ್ಥಿ ಸತೀಶ ಹಾನಗಲ್‌ ಅವರು ಓಂ ಚಿಹ್ನೆ ಇರುವ ಶಾಲು ಹಾಕಿಕೊಂಡು ಬಂದಿದ್ದಕ್ಕೆ ಕಾಂಗ್ರೆಸ್‌ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಪಾಲಿಕೆಯ 22ನೇ ಅವಧಿಯ ಮೇಯರ್ ಉಪಮೇಯ‌ ಆಯ್ಕೆಗೆ ಪಾಲಿಕೆಯ ಧಾರವಾಡದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಂಗಣದಲ್ಲಿ ಚುನಾವಣೆ ನಡೆಯುತ್ತಿದೆ.
ಸತೀಶ ಹಾನಗಲ್‌ ಅವರು ಕೇಸರಿ ಶಾಲು ಹಾಕಿಕೊಂಡು ಸಭಾಂಗಣಕ್ಕೆ ಬಂದು ನಾಮಪತ್ರ ಸಲ್ಲಿಸಿದರು.

ಇದನ್ನು ಗಮನಿಸಿದ ಕಾಂಗ್ರೆಸ್‌ ಮೇಯರ್ ಅಭ್ಯರ್ಥಿ ಸುವರ್ಣ ಕಲ್ಲಕುಂಟ ಮತ್ತು ದೊರೆರಾಜ ಮಣಿಕುಂಟ ಆಕ್ಷೇಪ ವ್ಯಕ್ತಪಡಿಸಿದರು. ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ., ಪ್ರತಿಕ್ರಿಯಿಸಿ, ಇದನ್ನು ಚುನಾವಣಾಧಿಕಾರಿ ಗಮನಕ್ಕೆ ತಂದು ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
Post a Comment

Post a Comment