-->
Bookmark

Karnataka: ಮುಂದಿನ 48 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 48 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ 

ಜೂನ್‌ ಮೂರನೇ ವಾರ ಕಳೆದರೂ, ರಾಜ್ಯಕ್ಕೆ ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಿಲ್ಲ. ರಾಜ್ಯದ ನಾನಾ ನದಿಗಳು ಬತ್ತಿಹೋಗಿವೆ. ಕುಡಿಯುವ ನೀರಿಗೂ ಹಲವೆಡೆ ಹಾಹಾಕಾರ ಆರಂಭವಾಗಿದೆ. ರೈತರು ಮುಂಗಾರು ಬಿತ್ತನೆ ಮಾಡಲಾಗದೆ ಬರದ ಆತಂಕದಲ್ಲಿ ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಹವಾಮಾನ ಇಲಾಖೆ ಇನ್ನೆರಡು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಬರದ ಭೀತಿಯಲ್ಲಿದ್ದ ರೈತ ಈಗ ಮಳೆಯ ನಿರೀಕ್ಷೆಯಲ್ಲಿದ್ದಾನೆ. 
ರಾಜ್ಯದ ನಾನಾ ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
Post a Comment

Post a Comment