Asia Cup Cricket - Indian Team
ಏಷ್ಯಾ ಕಪ್ ಗೆ ಭಾರತ ತಂಡ ಪ್ರಕಟ : 18ರ ಬಳಗದಲ್ಲಿ ಇಬ್ಬರು ಕನ್ನಡಿಗರು
ಆಗಸ್ಟ್ 31ರಿಂದ ಆರಂಭವಾಗುವ ಏಷ್ಯಾ ಕಪ್ ಏಕದಿನ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ(ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಪ್ರಸಿದ್ಧ ಕೃಷ್ಣ ಮೀಸಲು ಆಟಗಾರ : ಸಂಜು ಸ್ಯಾಮ್ರನ್
ಒಟ್ಟು 18 ಮಂದಿ ಇರುವ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಘೋಷಣೆ ಮಾಡಿದರು.
ನಾಲ್ವರು ಆಟಗಾರರು ವೇಗದ ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆದಿದ್ದರೆ, ತಂಡದಲ್ಲಿ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಕುಲದೀಪ್ ಯಾದವ್ ಮಾತ್ರ ಆಯ್ಕೆಯಾಗಿದ್ದಾರೆ.
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡಿದ್ದ ತಿಲಕ್ ವರ್ಮಾ ಇಡೀ ಸರಣಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. ಆದರೆ ಐರ್ಲೆಂಡ್ ಪ್ರವಾಸದಲ್ಲಿ ತಿಲಕ್ ಅಷ್ಟೇನೂ ರನ್ ಗಳಿಸಿರಲಿಲ್ಲ. ಅದರ ಹೊರತಾಗಿಯೂ, ಬಿಸಿಸಿಐ ಆಯ್ಕೆ ಸಮಿತಿ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ಏಕದಿನ ತಂಡದಲ್ಲಿ ಅವಕಾಶ ನೀಡಿದೆ.
Post a Comment