Dharwad :
ಉದ್ಯಮಿಗಳ ಸಾಲಮನ್ನಾ- ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ: ಪ್ರಹ್ಲಾದ ಜೋಶಿ
ಕೇಂದ್ರ ಸರ್ಕಾರ ಉದ್ಯಮಿಗಳ ಹತ್ತಾರು ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿರುವುದರಲ್ಲಿ ಹುರುಳಿಲ್ಲ. ಕಾಂಗ್ರೆಸ್ ನವರು ಸುಳ್ಳು ಹೇಳುವುದರಲ್ಲಿ ಸ್ಪರ್ಧೆಯಲ್ಲಿ ತೊಡಗಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಕುಟುಕಿದರು.
ಅಳ್ಳಾವರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡಲಾಗಿದೆ ಎಂಬುದನ್ನು ಅವರು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಸಾಬೀತುಪಡಿಸದಿದ್ದರೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಾರಾ ಎಂದು ಸವಾಲು ಹಾಕಿದರು.
Post a Comment