Gadag :
ತಾಲೂಕು ಮಟ್ಟದ ಕ್ರೀಡಾಕೂಟ : ಕೆ.ವಿ.ಎಸ್.ಆರ್ ಪದವಿ ಪೂರ್ವ ಕಾಲೇಜ್ ಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ
ಗದಗ :
ಗದಗ ತಾಲೂಕ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ ವಿಭಾಗದಲ್ಲಿ ನಮ್ಮ ಕೆ. ವಿ. ಎಸ್. ಆರ್. ಪದವಿ ಪೂರ್ವ ಕಾಲೇಜು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದೆ. ನಮ್ಮ ಕನಕದಾಸ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳು ಹಾಗೂ ರಾಜ್ಯ ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯ ಕಾಯ೯ದಶಿ೯ಗಳಾದ ಸನ್ಮಾನ್ಯ ಶ್ರೀ ರವಿಂದ್ರನಾಥ ಬಿ ದಂಡಿನರವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಮಾಡಿ, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅತೀ ಹೆಚ್ಚು ಪ್ರಶಸ್ತಿ ಪಡೆದುಕೊಳ್ಳುಲು ಪ್ರೋತ್ಸಾಹಿಸಿ, ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯ ಶ್ರೀ ಉಮೇಶ್ ಹಿರೇಮಠ ಹಾಗೂ ಸಂಕೇತ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಂಬಾರ, ಕನ್ನಡ ಹಿರಿಯ ಉಪನ್ಯಾಸಕರಾದ ಶ್ರೀ ಸತೀಶ್ ಪಾಶಿ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Post a Comment