Ron :
ಬುಧವಾರ ಗೃಹ ಲಕ್ಷ್ಮೀ ಯೋಜನೆ ಲೋಕಾರ್ಪಣೆ : ಫಲಾನುಭವಿಗಳ ಖಾತೆಗೆ 2000 ಜಮಾ - ಶಾಸಕ ಜಿ.ಎಸ್ ಪಾಟೀಲ್
ಇದೇ ತಿಂಗಳ 30 ರಂದು ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದ್ದು, ನೇರ ಪ್ರಸಾರ ವೀಕ್ಷಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಜಿ.ಎಸ್ ಪಾಟೀಲ್ ಹೇಳಿದ್ದಾರೆ. ವಿಡಿಯೋ ಸಂದೇಶದಲ್ಲಿ, ಮಹತ್ವಾಕಾಂಕ್ಷಿ ಯೋಜನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು ಮೈಸೂರಿನಲ್ಲಿ ಈ ಕಾರ್ಯಕ್ರಮವನ್ನ ಲೋಕಾರ್ಪಣೆ ಮಾಡಲಿದ್ದಾರೆ ಡಂದು ಹೇಳಿದ್ದಾರೆ. ಇದೇ ಸಂಧರ್ಭದಲ್ಲಿ ರೋಣ ಕ್ಷೇತ್ರದಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಿ ಕೇಂದ್ರ ಮತ್ತು ಪುರಸಭೆ, ಪಟ್ಟಣ ಪಂಚಾಯತಿ ಕೇಂದ್ರದಲ್ಲೂ ಕೂಡ ಗೃಹ ಲಕ್ಷ್ಮೀ ಯೋಜನೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಮನೆಯ ಯಜಮಾನಿಗಳು, ಫಲಾನುಭವಿಗಳು ತಮ್ಮ ಮೊಬೈಲ್ ಫೋನ್ ಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈಗಾಗಲೇ ನಿಮ್ಮ ಮನೆಗೆ ತಿಳುವಳಿಕೆ ಪತ್ರವನ್ನ ಮುಟ್ಟಿಸಿದ್ದಾರೆ.
ಬುಧವಾರ ಮಧ್ಯಾಹ್ನ 12 ಗಂಟೆಗೆ ಪ್ರತಿಯೊಂದು ಗ್ರಾಮ ಪಂಚಾಯತಿ, ಪುರಸಭೆ, ಪಟ್ಟಣ ಪಂಚಾಯತಿಯಲ್ಲಿ ಹಾಜರಿದ್ದು, ಜೊತೆಗೆ ಪ್ರತಿನಿಧಿಗಳು, ಫಲಾನುಭವಿಗಳು, ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ, ಫಲಾನಿಭವಿಗಳ ಖಾತೆಗೆ ನೇರವಾಗಿ 2000 ರೂಪಾಯಿ ಜಮಾವಣೆಯಾಗಲಿದ್ದು, ಸಂದೇಶ ಸಹ ನಿಮ್ಮ ಮೊಬೈಲ್ ಗೆ ಬರಲಿದೆ ಎಂದು ಶಾಸಕ ಜಿ.ಎಸ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
Post a Comment