Bengaluru :
ಜೆಡಿಎಸ್‌ಗೆ ಬಿಗ್ ಶಾಕ್: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ
ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿ ಗೆದ್ದಿದ್ದರು. ದೇವೇಗೌಡರ ಕುಟುಂಬದ ಪ್ರಭಾವಿ ಯುವ ನಾಯಕನಾಗಿಯೂ ಬೆಳೆಯುತ್ತಿರುವ ಪ್ರಜ್ವಲ್ ರೇವಣ್ಣ ಈಗ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಆರು ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ.ದೇವರಾಜೇಗೌಡ ಎಂಬುವರು, ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಏ.26, 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಪ್ರಜ್ವಲ್ ರೇವಣ್ಣ ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು, ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿತ್ತು, ಈ ಹಿನ್ನೆಲೆಯಲ್ಲಿ ಕೂಲಂಕುಷವಾಗಿ ಪರಿಶೀಲಿಸಿ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.
ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಭೇರಿ ಬಾರಿಸಿದ ಪ್ರಜ್ವಲ್ ರೇವಣ್ಣ ಅವರು ಚೊಚ್ಚಲ ಪ್ರಯತ್ನದಲ್ಲೇ ಜಯ ಗಳಿಸಿದ್ದರು. ಆದರೆ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹಾಸನದಲ್ಲಿ ಸೋಲು ಕಂಡ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು 2019ರ ಜೂನ್ 26ರಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು.
ವಿಪರ್ಯಾಸದ ಸಂಗತಿ ಏನೆಂದರೆ, ಪ್ರಜ್ವಲ್ ರೇವಣ್ಣ ವಿರುದ್ಧ ಅರ್ಜಿ ಹಾಕಿರುವ ಎ. ಮಂಜು ಅವರು ಸದ್ಯ ಅರಕಲಗೂಡು ವಿಧಾನಸಭಾ ಕ್ಷೇತ್ರ ಜೆಡಿಎಸ್ ಶಾಸಕ. ಮೊದಲು ಕಾಂಗ್ರೆಸ್‌ನಲ್ಲಿದ್ದ ಎ. ಮಂಜು ಆ ಬಳಿಕ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಆ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.
ಮಂಜು ಅವರ ಪುತ್ರ ಮಂಥರ್ ಗೌಡ ಮಡಿಕೇರಿ ವಿಧಾನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಲೋಕಸಭಾ ಚುನಾವಣೆಗೆ 6 ತಿಂಗಳು ಇರುವಾಗ ಪ್ರಜ್ವಲ್ ರೇವಣ್ಣ ಅನರ್ಹಗೊಂಡಿದ್ದಾರೆ.
Post a Comment