ICC MENS CRICKET WORLd CUP 2023 _ INDIA _ SQUAD
ಏಕದಿನ ವಿಶ್ವಕಪ್ : ಟೀಮ್ ಇಂಡಿಯಾ ಪ್ರಕಟ
2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
15 ಮಂದಿಯ ತಂಡವನ್ನು ಪ್ರಕಟಿಸಿದ್ದು, ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ಇಬ್ಬರಿಗೂ ವಿಕೆಟ್ ಕೀಪಿಂಗ್ ಹೊಣೆ ನೀಡಲಾಗಿದೆ.
ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದು, ಸಂಜು ಸ್ಯಾಮ್ಪನ್ ಅವರ ಹೆಸರನ್ನು ಪಟ್ಟಿಯಿಂದ ಬಿಡಲಾಗಿದೆ.
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಮತ್ತು ಯಜುವೇಂದ್ರ ಚಹಾಲ್ ಅವರನ್ನು ತಂಡದಿಂದ ಕೈ ಬಿಟ್ಟಿರುವುದು ಅಚ್ಚರಿ ಮೂಡಿಸಿದೆ.
ಸದ್ಯ ಸಲ್ಲಿಸಲಾಗಿರುವ ಆಟಗಾರರ ಪಟ್ಟಿಯನ್ನು ಬದಲಾಯಿಸಲು ಸೆಪ್ಟೆಂಬರ್ 28ರವರೆಗೆ ಅನುಮತಿಸಲಾಗಿದೆ. ಏಕದಿನ ವಿಶ್ವಕಪ್ ಅಕ್ಟೋಬರ್ 5ರಂದು ಭಾರತದಲ್ಲಿ ಪ್ರಾರಂಭವಾಗಲಿದೆ.
15 ಮಂದಿಯ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಟೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್
Post a Comment