Bengaluru : ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
Team KIRA
... menit baca
Dengarkan
Bengaluru : ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : (Dec_03_2023)
ಮುಖ್ಯಮಂತ್ರಿ Siddaramaiah ಅವರು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.
ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡು ಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.
ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
Post a Comment