ಗಜೇಂದ್ರಗಡ : (Dec_03_2023)
'ತೆಲಂಗಾಣ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕರ್ನಾಟಕದ ಕಾಂಗ್ರೆಸ್ ನಾಯಕರು ಹೈದರಾಬಾದ್‌ಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಲ್ಲದೆ, ಸಚಿವರಾದ ಎನ್.ಎಸ್. ಬೋಸರಾಜು, ಡಾ.ಎಂ.ಸಿ ಸುಧಾಕರ್, ಶಾಸಕರಾದ ಕೆ.ವೈ. ನಂಜೇಗೌಡ, ಪ್ರದೀಪ್ ಈಶ್ವರ್ ಈ ಹೈಕಮಾಂಡ್ ಸೂಚನೆ ನೀಡಿರುವ ಕಾರಣ ಈಗಾಗಲೇ ಹೈದರಾಬಾದ್‌ಗೆ ತೆರಳಿದ್ದಾರೆ.
ಐದು ರಾಜ್ಯಗಳ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ, ವಿವಿಧ ವಿದ್ಯುನ್ಮಾನ ಮಾಧ್ಯಮಗಳು ನಡೆಸಿದ ಮತಗಟ್ಟೆ ಸಮೀಕ್ಷೆ ಪ್ರಕಟವಾಗಿದೆ. ತೆಲಂಗಾಣ ಹಾಗೂ ಛತ್ತೀಸಗಢ ರಾಜ್ಯಗಳ ಮತದಾರರು ಕಾಂಗ್ರೆಸ್ ಪಕ್ಷವನ್ನು ಗದ್ದುಗೆಯ ಸನಿಹಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. 'ಕೈ' ಪಾಳಯದ ಪ್ರಬಲ ಸ್ಪರ್ಧೆಯ ನಡುವೆಯೂ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆಗಳು 'ಭವಿಷ್ಯ' ನುಡಿದಿವೆ.
ಇಂದು ಮಧ್ಯಾಹ್ನದ ವೇಳೆಗೆ ಸಂಪೂರ್ಣ ಫಲಿತಾಂಶ ಹೊರ ಬೀಳಲಿದೆ.
Post a Comment