ಮಂಗಳೂರು: (Dec_24_2023)
ಪ್ರತಿಷ್ಠಿತ ಆಳ್ವಾಸ್ ನ
ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್ (18) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆಳ್ವಾಸ್ ಸಂಸ್ಥೆ ಹಾಸ್ಟೆಲ್‌ನ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳದ ಮಲ್ಲಪ್ಪ ಎಂಬುವವರ ಮಗ ಮನೋಜ್ ಮೂಡಬಿದ್ರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ವಿಷಯ ತಿಳಿಯುತ್ತಿದ್ದಂತೆ ಹಾಸ್ಟೆಲ್‌ಗೆ ಪೋಷಕರು ತೆರಳಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಮನೋಜ್ ಪೋಷಕರು ಸೂಕ್ತ ತನಿಖೆ ನಡೆಸುವಂತೆ ಮೂಡಬಿದ್ರೆ ಪೊಲೀಸರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
Post a Comment