-->
Bookmark

Gajendragad : ತಾಯಂದಿರುವ ಮಕ್ಕಳಿಗೆ ಮೌಲ್ಯಗಳನ್ನು ಬಿತ್ತಿ

Gajendragad : ತಾಯಂದಿರುವ ಮಕ್ಕಳಿಗೆ ಮೌಲ್ಯಗಳನ್ನು ಬಿತ್ತಿ
ಸಮಾಜದ ಬಹುದೊಡ್ಡ ಶಕ್ತಿಯೇ ಮಹಿಳೆ
ಗಜೇಂದ್ರಗಡ : (Mar_12_2024)
ಇಂದಿನ ಮಕ್ಕಳು ಅನುಕರಣೀಯ ಗುಣಗಳ   ಗೊಂದಲದಲ್ಲಿದ್ದಾರೆ. ಅದಕ್ಕಾಗಿ ಮನೆಯಲ್ಲಿ ತಾಯಂದಿರುವ ಶಾಲೆಯಲ್ಲಿ ಗುರುಮಾತೆಯರು ಮಾನವೀಯ ಮೌಲ್ಯಗಳನ್ನು ಹಾಗೂ ಸಂಬಂಧಗಳ ಪ್ರಾಮುಖ್ಯತೆಯನ್ನು ಅವರಲ್ಲಿ ಬಿತ್ತಬೇಕು ಎಂದು  ರಾಮಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎಸ್. ಎಚ್. ಬಂಡಿವಡ್ಡರ ಹೇಳಿದರು.
ಪಟ್ಟಣದ ಪುರ್ತಗೇರಿ ಕ್ರಾಸ್‌ ಬಳಿ ಇರುವ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಚರಣೆ ಮಾಡಲಾದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.
ನಾವು ಜೀವನದಲ್ಲಿ ಅಳವಡಿಸಿಕೊಳ್ಳುವ ನೀತಿ-ನಿಯಮ, ಆದರ್ಶ, ಶಿಸ್ತು, ಸಂಸ್ಕಾರ, ಮಾನವೀಯ ಗುಣ, ಸದಾಚಾರ, ಉತ್ತಮ ನಡವಳಿಕೆಗಳೇ ಮೌಲ್ಯಗಳಾಗಿವೆ. ಅನೇಕ ಮೌಲ್ಯಗಳ ಕುರಿತು ನಮ್ಮ ಗುರು-ಹಿರಿಯರಿಂದ ತಿಳಿದುಕೊಂಡಿರುತ್ತೇವೆ. ಆದರೆ ಜೀವನದಲ್ಲಿ ಈ ಮೌಲ್ಯಗಳನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತೇವೆ ಎನ್ನುವುದು ಮುಖ್ಯ ಎಂದರು.
ಸ್ತ್ರೀ ಎಂಬುದು ಸಮಾಜದ ಬಹುದೊಡ್ಡ ಶಕ್ತಿಯಾಗಿದ್ದು, ಈ ಶಕ್ತಿಯಿಂದ ಸಮಾ ಜದ ಹಾಗೂ ಕುಟುಂಬದ ಏಳಿಗೆ ಸಾಧ್ಯ.  ಸಮಾಜದಲ್ಲಿ ಮಕ್ಕಳಿಗೆ ಉಜ್ವಲ ಭವಿಷ್ಯ ರೂಪಿಸುವಲ್ಲಿಹಾಗೂ ಕುಟುಂಬ ನಿರ್ವಹಣೆಯಲ್ಲಿಯೂ ಹೆಚ್ಚಿನ ಜವಾಬ್ದಾರಿಯನ್ನು ಹೊಂದಿದ್ದು, ಅದನ್ನು ಸರಿದೂಗಿಸಿಕೊಂಡು ಹೋಗುವಲ್ಲಿಮಹಿಳೆಯರ ಪಾತ್ರ ಅಪಾರ ಎಂದು ಹೇಳಿದರು. ಸ್ತ್ರೀಯರು ಕೇವಲ ಅಡುಗೆ ಮನೆಗೆ ಸೀಮಿತವಾಗಿಲ್ಲಅವರು ಇಂದು ಎಲ್ಲಾಕ್ಷೇತ್ರಗಳಲ್ಲಿಯೂ ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿ ಸುತ್ತಿದ್ದಾರೆ ಎಂದು ತಿಳಿಸಿದರು.
ಪ್ರಾಚಾರ್ಯ ವಸಂತರಾವ್‌ ಗಾರಗಿ ಮಾತನಾಡಿ, ಮಹಿಳೆ ಭೂಮಿಯಂತೆ ತ್ಯಾಗಮಯಿ.ಭಾರತೀಯ ಸಂಸ್ಕೃತಿಯ ಪ್ರತಿಬಿಂಬವೂ ಹೌದು. ಸಮಾಜದಲ್ಲಿ ಎಲ್ಲರೂ ಆಕೆಯನ್ನು ಪೂಜ್ಯನೀಯ ಭಾವನೆಯಿಂದ ನೋಡಬೇಕು ಎಂದರು. ಇಂದಿನ ದಿನಗಳಲ್ಲಿ ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಪುರುಷರಿಗೆ ಸರಿ ಸಮಾನಾಗಿ ಹೆಜ್ಜೆ ಹಾಕುತ್ತಿರುವ ಮಹಿಳೆಯರು, ಕುಟುಂಬ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ಹೊರುತ್ತಿದ್ದಾರೆ ಎಂದರು. ಹೆಣ್ಣು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಮಹಿಳೆಯರು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಸಾಧನೆ ಮಾಡಬೇಕು. ಸಮಾಜವು ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದರು.
ಶಿಕ್ಷಕಿ ಎಂ. ಎಸ್. ಸುರಪುರ ಮಾತನಾಡಿ, ಕುಟುಂಬದ ಎಲ್ಲಾ ಸದ ಸ್ಯರು ಪ್ರಜ್ಞಾವಂತ ನಾಗರಿಕರಾಗಿ ಜೀವಿಸುವಲ್ಲಿ ಸ್ತ್ರೀಯರ ಪಾತ್ರ ಅಮೂಲ್ಯ ವಾದುದು ಎಂದರು. ಮಹಿಳಾ ಉದ್ಯಮಿಗಳ ಶಕ್ತಿಯು ದೇಶದ ಪ್ರಗತಿಗೆ ಪ್ರೇರಕ ಶಕ್ತಿಯಾಗಿದೆ. ದೇಶದ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯಾ ನಂತರದ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆ ಪ್ರಮುಖವಾಗಿದೆ. ಅನಾದಿ ಕಾಲದಿಂದಲೂ ನಾರಿಯನ್ನು ಪೂಜಿಸುತ್ತಾ ಬರಲಾಗಿದೆ. ದೇಶ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅಪಾರ. ಅವರ ಸಕಾರಾತ್ಮಕ ಆಲೋಚನೆಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಭಾರತವು ತನ್ನ ಇತಿಹಾಸ ಮತ್ತು ಸಂಸ್ಕೃತಿಯಿಂದಾಗಿ ಇಡೀ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ನಮ್ಮ ದೇಶವು ಸಾಂಸ್ಕೃತಿಕ, ರಾಜಕೀಯ, ಆರ್ಥಿಕ, ಮಿಲಿಟರಿ ಶಕ್ತಿ ಇತ್ಯಾದಿಗಳಲ್ಲಿ ವಿಶ್ವದ ಪ್ರಮುಖ ದೇಶಗಳಲ್ಲಿ ಸೇರಲು ಮಹಿಳೆಯರ ಪಾತ್ರ ದೊಡ್ಡದಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಮುಖ್ಯ ಶಿಕ್ಷಕಿ ಎಸ್. ಎಚ್. ಬಂಡಿವಡ್ಡರ ಅವರಿಗೆ ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎ. ಡಿ. ಜಾತಗೇರ, ಪ್ರತಿಭಾ ಲಕ್ಷಕೊಪ್ಪದ, ವಿಜಯಲಕ್ಷ್ಮೀ ಅರಳಿಕಟ್ಟಿ, ಸಂಗೀತಾ ನಾಲತವಾಡ, ಪ್ರೀತಿ ಹೊಂಬಳ, ಅರುಣಾ ಕಣವಿ, ಸಂಗಮೇಶ ವಸ್ತ್ರದ, ಬಸವರಾಜ ಸಂಕದಾಳ, ರವಿ ಹಲಗಿ ಭಾಗವಹಿಸಿದ್ದರು. 
Post a Comment

Post a Comment