ಗಜೇಂದ್ರಗಡ : (Sept_30_09_2024)
ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರನ್ನ ಅಮಾನತು ಮಾಡಬೇಕೆಂದು ಜೆಡಿಎಸ್ ಆಗ್ರಹಿಸಿದೆ. ಗಜೇಂದ್ರಗಡದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಗದಗ ಜಿಲ್ಲಾಧ್ಯಕ್ಷ ಎಂ.ವೈ ಮುಧೋಳ್, ಕೇಂದ್ರ ಸಚಿವ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಅವಮಾನ ಮಾಡಿದ್ದಾರೆ.
ತನಿಖೆ ಹೆಸರಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿದರು. ಅವಾಚ್ಯ ಪದ ಬಳಸಿದ ಅವರನ್ನ ಅಮಾನತು ಮಾಡಬೇಕು. ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಅಲ್ಲದೇ, ತಪ್ಪಿತಸ್ತ ಅಧಿಕಾರಿ ವಿರುಧ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಅಕ್ಟೋಬರ್ 1ರ ಗ್ರಾಂಧಿ ಜಯಂತಿ ಮುನ್ನಾದಿನ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದರು.
ಈ ಮನವಿಯನ್ನ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ರಾಜ್ಯಪಾಲರಿಗೆ ಸಲ್ಲಿಸಲಿದ್ದೇವೆ. ಸರ್ಕಾರ ಐಪಿಎಸ್ ಅಧಿಕಾರಿಯನ್ನ ಅಮಾನತು ಮಾಡದಿದ್ದರೇ, ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ, ಗದಗ ಜಿಲ್ಲೆಯ ಎಲ್ಲ ತಾಲೂಕಿನ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಿರಾ ನ್ಯೂಸ್ ಕನ್ನಡಕ್ಕೆ ಜೆಡಿಎಸ್ ಜಿಲ್ಲಾಧ್ಯಕ್ಷ ಮಕ್ತುಮಸಾಬ್ ಮುಧೋಳ್ ಹೇಳಿದ್ದಾರೆ.
Post a Comment