-->
Bookmark

Bengaluru : "ಶರಣರ ಶಕ್ತಿ" ಚಿತ್ರ ಬಿಡುಗಡೆ‌ ಕ್ಷಣಗಣನೆ

Bengaluru : "ಶರಣರ ಶಕ್ತಿ" ಚಿತ್ರ ಬಿಡುಗಡೆ‌ ಕ್ಷಣಗಣನೆ
ಬೆಂಗಳೂರ : (Oct_10_2024)
ವಿಶ್ವಗುರು ಬಸವಣ್ಣ ಹಾಗೂ ಚಿನ್ಮಯ ಜ್ಞಾನಿ ಚನ್ನಬಸವಣ್ಣ ಅವರ ೧೨ ನೇ ಶತಮಾನದ ಸಮಾನತೆ ಸಾರುವ ಬಹು ನಿರೀಕ್ಷಿತ ಕನ್ನಡ ಚಲನ ಚಿತ್ರ "ಶರಣರ ಶಕ್ತಿ" ಬಿಡುಗಡೆಗೆ ಕಾಲ ಸನ್ನಿಹಿತವಾಗಿದೆ.
ಸೋಮವಾರ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಶರಣರ ಶಕ್ತಿ ಚಿತ್ರವನ್ನು ನಾಡಿನ ಹೆಸರಾಂತ ಶರಣರು, ಜಗದ್ಗುರುಗಳು, ಗಣ್ಯರು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಹನ್ನೆರಡನೇ ಶತಮಾನದಲ್ಲಿ ಶರಣರು, ಅನುಭವ ಮಂಟಪ ಮತ್ತು ವಿಶ್ವಗುರು ಬಸವಣ್ಣ ಎನ್ನುವುದು ಎಷ್ಟು ಆಕರ್ಷಕವಾಗಿತ್ತು. ಇಂತಹ ಅಂಶಗಳನ್ನು ಸಂಶೋಧನೆ ನಡೆಸಿ ’ಶರಣರ ಶಕ್ತಿ’ ಎನ್ನುವ ಚಿತ್ರವೊಂದು ಪೋಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣಗೊಳಿಸಿ, ಬಿಡುಗಡೆಗಾಗಿ ತಯಾರಿ ನಡೆಸಿದೆ.

ಶರಣರ ಶಕ್ತಿ ಚಲನ ಚಿತ್ರ ’ತಡಿವ್ಯರ ನೋಡು’ ಎಂಬ ಅಡಿಬರಹವಿದೆ. ಶರಣರನ್ನು ತಡುವಿದರೇ ಆಗುವ ಕ್ರಾಂತಿಗಳ ಕುರಿತು ಚಿತ್ರದಲ್ಲಿ ಉತ್ತಮವಾಗಿ ತೋರಿಸಲಾಗಿದೆ. ಪ್ರಚಾರದ ಮೊದಲ ಹಂತವಾಗಿ ’ಬಸವ ಜಯಂತಿ’ ಮುನ್ನ ದಿನದಂದು ಹಾಡು ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ಈಗಾಗಲೇ ರೇಣುಕಾಂಬ ಸ್ಟುಡಿಯೋದಲ್ಲಿ  ನಡೆಸಲಾಗಿದೆ.

ಶ್ರೀಷ ಫಿಲಂಸ್ ಅಡಿಯಲ್ಲಿ ಆರಾಧನಾ ಕುಲಕರ್ಣಿ ಬಂಡವಾಳ ಹೂಡುವ ಜತೆಗೆ ಅಕ್ಕ ನಾಗಮ್ಮನ ಪಾತ್ರಕ್ಕೆ ಬಣ್ಣ ಹಚ್ಚಿ ಮನೇಜ್ಞ ಅಭಿನಯ ಮಾಡಿದ್ದಾರೆ. ಪದ್ಮ ವಿಭೂಷಣ ಡಾ.ರಾಜ್‌ಕುಮಾರ್ ಸಂಸ್ಥೆಯ ವಜ್ರೇಶ್ವರಿ ಕಂಬೈನ್ಸ್‌ದಲ್ಲಿ ಕೆಲಸ ಮಾಡಿರುವ ದಿಲೀಪ್ ಶರ್ಮ ಸಿನಿಮಾಕ್ಕೆ ರಚನೆ, ಕಥೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ, ನಿರ್ದೇಶನ ಮಾಡಿದ್ದಾರೆ.
Post a Comment

Post a Comment