-->
Bookmark

Bengaluru : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ : ರಾಜ್ಯಪಾಲರ ಬದಲು CM ಕುಲಾಧಿಪತಿ

Bengaluru : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ : ರಾಜ್ಯಪಾಲರ ಬದಲು CM ಕುಲಾಧಿಪತಿ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಕಿತ್ತು ಮುಖ್ಯಮಂತ್ರಿ ಅವರಿಗೆ ನೀಡಲು ಸರ್ಕಾರ ನಿರ್ಧರಿಸಿದೆ.

ಈ ಬದಲಾವಣೆ ತರಲು, ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ 'ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ 2024' ಮಂಡಿಸಲಾಗುವುದು ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಈ ವಿಶ್ವವಿದ್ಯಾಲಯವನ್ನು ಹೆಚ್ಚು ಕ್ರಿಯಾಶೀಲವಾಗಿಸಲು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದರಿಂದ ಉಪಕುಲಪತಿಯ ನೇಮಕವೂ ಸೇರಿ ರಾಜ್ಯಪಾಲರಿಗಿದ್ದ ಸಂಪೂರ್ಣ ಅಧಿಕಾರ ಮುಖ್ಯಮಂತ್ರಿಯವರಿಗೆ ಹಸ್ತಾಂತರವಾಗಲಿದೆ.

ಈ ಮಸೂದೆಗೆ ರಾಜ್ಯಪಾಲರ ಅಂಕಿತ ಅಗತ್ಯವಿದೆ ಎಂದು ಅವರು ಹೇಳಿದರು.

Post a Comment

Post a Comment