ಗಜೇಂದ್ರಗಡ : (Nov_28_2024)
ಕುಂಟೋಜಿ ಸರ್ಕಾರಿ ಶಾಲೆಯ ಸಹ ಶಿಕ್ಷಕ ಅಶೋಕ್ ಕಲ್ಲಿಗನೂರ್ ಅವರ ಮಾವ ನಿವೃತ್ತ HESCOM ಅಧಿಕಾರಿ ವೀರಪ್ಪ ಹವಳಪ್ಪನವರ್ ಇನ್ನಿಲ್ಲ. ಸರಳ ಸಜ್ಜನ ವ್ಯಕ್ತಿಯಾಗಿದ್ದ ಇವರು 27/11/2024ರ ಬುಧವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಗುರುವಾರ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ವೀರಪ್ಪ ಹವಳಪ್ಪನವರ್ ಅಗಲಿಕೆಯಿಂದ ಕುಟುಂಬದಲ್ಲಿ ನಿರವ ಮೌನ ಆವರಿಸಿದೆ. ಮೂವರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಸೇರಿದಂತೆ ಅಪಾರ ಬಂಧು ಮಿತ್ರರನ್ನ ಅಗಲಿದ್ದಾರೆ. ವೀರಪ್ಪ ಅವರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು, ವೃತ್ತಿಯಲ್ಲಿ ಸಮಾಜ ಸೇವೆ ಮಾಡಿದ್ದಾರೆ.
Post a Comment