-->
Bookmark

Naregal : ಸೈಬರ್ ಅಪರಾಧಗಳ ಕುರಿತು ನಾಳೆ ಜಾಗೃತಿ ಕಾರ್ಯಕ್ರಮ

Naregal : ಸೈಬರ್ ಅಪರಾಧಗಳ ಕುರಿತು ನಾಳೆ ಜಾಗೃತಿ ಕಾರ್ಯಕ್ರಮ 

ಸರ್ಕಾರಿ ಪದವಿ ಕಾಲೇಜಿನಲ್ಲಿ ಗದಗ ಸಿಇಎನ್ ಪೊಲೀಸ್ ಠಾಣೆಯಿಂದ ಆಯೋಜನೆ

ನರೇಗಲ್:‌ (Nov_06_2024)

ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸೈಬರ್ ಆರ್ಥಿಕ ಮತ್ತು ಮಾದಕ ವಸ್ತುಗಳ ಅಪರಾಧ ಪೊಲೀಸ್ ಠಾಣೆ (ಸಿಇಎನ್)‌ ಗದಗ ಇವರ ವತಿಯಿಂದ  ಪದವಿ ಹಂತದ ವಿದ್ಯಾರ್ಥಿಗಳಿಗಾಗಿ “ಸೈಬರ್ ಕ್ರೈಂ ಮತ್ತು ಮಾದಕ ವಸ್ತುಗಳ ಅಪರಾಧಗಳ” ಕುರಿತು ಜಾಗೃತಿ ಕಾರ್ಯಕ್ರಮವನ್ನು ನವೆಂಬರ್‌ 7 ರಂದು ಬೆಳಿಗ್ಗೆ 11:00 ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಗದಗ ಸಿಇಎನ್‌  ಪೊಲೀಸ್‌ ಠಾಣೆಯ ಡಿವೈಎಸ್‌ಪಿ  ಮಹಾಂತೇಶ ಸಜ್ಜನ ಇವರು ಉಪನ್ಯಾಸ ನೀಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಎಸ್.‌ ಎಲ್.‌ ಗುಳೆದಗುಡ್ಡ ಅಧ್ಯಕ್ಷತೆ ವಹಿಸಲಿದ್ದಾರೆ. ಪೊಲೀಸ್‌ ಇಲಾಖೆಯ ಸಿಬ್ಬಂದಿಗಳು, ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಮಹಾವಿದ್ಯಾಲಯದ ಐಕ್ಯೂಎಸಿ ವಿಭಾಗದ ವತಿಯಿಂದ ತಿಳಿಸಿದರು.
Post a Comment

Post a Comment