ಜಾನಪದ ಸಾಹಿತ್ಯ ನಶಿಸಿ ಹೋಗುತ್ತಿದ್ದು ಅದನ್ನು ಉಳಿಸಿ ಬೆಳೆಸುವ ಕಾರ್ಯ ನಿಮ್ಮಿಂದ ನಡೆಯಬೇಕೆಂದು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಗರಾಜ್ ನಾಯಕ್ ಹೇಳಿದರು. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಸೂಡಿಯ ಸರ್ಕಾರಿ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯಲ್ಲಿ ನಡೆದ ಜಾನಪದ ಗೀತಗಾಯನ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದ ಅವರು, ಜಾನಪದ ಸಾಹಿತ್ಯ ಗ್ರಾಮೀಣ ಭಾಗದಲ್ಲಿ ಜೀವಂತೆ ಇದೆ. ಇಂದಿಗೂ ಹಳ್ಳಿ ಜನರು ಜಾನಪದ ಹಾಡುಗಳನ್ನ ಹಾಡುತ್ತಾರೆ. ಕೆಳ ಸಮುದಾಯದಿಂದ ಹಿಡಿದು ಎಲ್ಲರೂ ಜಾನಪದ ಹಾಡುಗಳನ್ನ ಹಾಡುತ್ತಾರೆ. ಭಾಷೆಯನ್ನ ಜೀವಂತವಾಗಿರಿಸಿದ್ದಾರೆ ಎಂದು ಹೇಳಿದರು. ಇದೇ ವೇಳೆ, ಅಳಿವಿನ ಅಂಚಿನಲ್ಲಿರುವ ಜಾನಪದ ಸಾಹಿತ್ಯ ಉಳಿಸಿ, ಬೆಳೆಸುವ ಜವಾಬ್ದಾರಿ ಯುವ ಜನತೆ ಮೇಲಿದೆ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಗಜೇಂದ್ರಗಡ ಹಾಗೂ ಸರ್ಕಾರಿ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ ಸೂಡಿ ಜಂಟಿಯಾಗಿ ಮಕ್ಕಳ ದಿನಾಚರಣೆ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಡಗತ್ತಿ ಮಾತನಾಡಿ, ಮಕ್ಕಳ ಪ್ರತಿಭೆ ಅನಾವರಣಕ್ಕೆ ಇದೊಂದು ವೇದಿಕೆಯಾಗಿದೆ ಎಂದು ಹೇಳಿದರು.
ಇದೇ ವೇಳೆ, ಶ್ರೀಮತಿ ಬಿ.ಟಿ ಹೋಸಮನಿ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳ ಕುರಿತು ಸೋಗಸಾಗಿ ವಿವರಿಸಿದರು.
ಸಹ ಶಿಕ್ಷಕಿಯರು ಸಹ ವೇದಿಕೆ ಮೇಲಿದ್ದರು.
ಒಟ್ಟು 15 ಜನ ವಿದ್ಯಾರ್ಥಿಗಳು ಸ್ಪರ್ಧಿಸಿದ್ದು, ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಪತ್ರವನ್ನು ಪ್ರದಾನ ಮಾಡಲಾಯಿತು.
Post a Comment