ಅದ್ದೂರಿ ಸ್ವಾಗತಕ್ಕೆ ಸಜ್ಜಾದ ಆಡಳಿತ ಮಂಡಳಿ
ವಿದ್ಯಾರ್ಥಿಗಳ ಪ್ರೋತ್ಸಾಹಿಸುವ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ
ಗಜೇಂದ್ರಗಡ : (Jan_08_2025)
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳು ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ವಿಭಾಗದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ರಾಜ್ಯಮಟ್ಟದ ಆಂಗ್ಲ ಭಾಷಾ ಚರ್ಚಾ ಸ್ಪರ್ಧೆಯಲ್ಲಿ ವಾಣಿಜ್ಯ ವಿಭಾಗದ ನಮ್ರತಾ ಪಾಟೀಲ್ ಪ್ರಥಮ ಸ್ಥಾನ ಪಡೆದ್ರೆ, ಪ್ರಥಮ ಪಿಯು ವಿಭಾಗದ ಐಶ್ವರ್ಯ ಯತ್ನಟ್ಟಿ ಕ್ವಿಜ್ ನಲ್ಲಿ ತೃತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಪ್ರಥಮ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶ್ರೀಕಾಂತ್ ವಾಲಿಕಾರ್ ಕ್ವಿಜ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಶಾಲಾ ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ವತಿಯಿಂದ ತುಮಕೂರಿನ ಎಂಪ್ರೆಸ್ ಬಾಲಕಿಯರ ಪಿಯು ಕಾಲೇಜಿನಲ್ಲಿ ಜನವರಿ 8 ರಂದು ಕಾರ್ಯಕ್ರಮ ನಡೆದಿದ್ದು, ಜನವರಿ 9 ರ ಗುರುವಾರ ವಿಜೇತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗಜೇಂದ್ರಗಡ ಬಸ್ ನಿಲ್ದಾಣದಿಂದ ಅದ್ದೂರಿಯಾಗಿ ಸ್ವಾಗತಿಸಲು ಶ್ರೀ ಅನ್ನದಾನೇಶ್ವರ ಕಾಲೇಜಿನ ಆಡಳಿತ ಮಂಡಳಿ ನಿರ್ಧರಿಸಿದೆ. ಗಜೇಂದ್ರಗಡದ ಕೀರ್ತಿ ಹೆಚ್ಚಿಸಿದ ಯುವ ಪ್ರತಿಭೆಗಳಿಗೆ ಅದ್ದೂರಿ ಸ್ವಾಗತಕ್ಕೆ ಪಟ್ಟಣ ಸಜ್ಜಾಗಿದೆ.
ಕಾಲೇಜಿನಲ್ಲೂ ಸ್ವಾಗತಕ್ಕೆ ಸಕಲ ಸಿದ್ಧತೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ, ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರೋತ್ಸಾಹಿಸಬೇಕಿದೆ.
ಯುವ ಪ್ರತಿಭೆಗಳನ್ನ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವ ಶ್ರೀ ಅನ್ನದಾನೇಶ್ವರ ಆಡಳಿತ ಮಂಡಳಿ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Post a Comment