ಧಾರವಾಡ : (Jan_15_2025)
ಮೂಡಾ ಹಗರಣ ಕೇಸ್ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿ ಜನವರಿ 27 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಮಣಿಂದರ್ ಸಿಂಗ್ ಹಾಜರಾಗಿದ್ದು, ಸ್ನೇಹಮಯಿ ಕೃಷ್ಣ ಅವರ ಪರವಾಗಿ ಮಣಿಂದರ್ ಸಿಂಗ್ ಅವರು ವಾದ ಮಂಡಿಸಿದರು.
Post a Comment