-->
Bookmark

Gadag : ಅಕ್ರಮ ಆಸ್ತಿ ಗಳಿಕೆ ಆರೋಪ : ಗದಗ ಇಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾ ದಾಳಿ

Gadag : ಅಕ್ರಮ ಆಸ್ತಿ ಗಳಿಕೆ ಆರೋಪ : ಗದಗ ಇಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾ ದಾಳಿ   

ಗದಗ: (Jan_08_2025)

ಗದಗ ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಗದಗ ಬೆಟಗೇರಿ ನಗರಸಭೆ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆದಿದ್ದು, ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆಸಲಾಗಿದೆ.

ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ರೇಡ್ ಆಗಿದ್ದು, ಲೋಕಾಯುಕ್ತ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ.

ಲೋಕಾಯುಕ್ತ ಎಸ್ ಪಿ ಹನಮಂತರಾಯ್, ಡಿವೈಎಸ್ ಪಿ ವಿಜಯ್ ಬಿರಾದಾರ್, ಇನ್ಸಪೆಕ್ಟರ್ ಪರಮೇಶ್ ಕವಟಗಿ ಸೇರಿದಂತೆ ಧಾರವಾಡ ಸಿಬ್ಬಂದಿಯಿಂದ ದಾಖಲೆ ಪರಿಶೀಲನೆ ನಡೆಸಲಾಗ್ತಿದ್ದು, ಪಿಎಸ್ ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಭಾಗಿಯಾಗಿದ್ದಾರೆ.
Post a Comment

Post a Comment