ಕೊಲೆ ಆರೋಪ ಸಾಭಿತಾದ ಹಿನ್ನೆಲೆ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಜಿಲ್ಲಾ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.
ಪ್ರಿತಿಸಿ ಮದುವೆಯಾಗಿದ್ದ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ಮಾದರ ಅವರನ್ನು 2019 ರಲ್ಲಿ ಗಂಗಮ್ಮ ಸಂಬಂದಧಿಕರು ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಕುಟುಂಬಸ್ಥರ ವಿರೋಧ ನಡುವೆ ಗಂಗಮ್ಮ ಪ್ರೀತಿಸಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗಂಗಮ್ಮ ಸಂಬಂಧಿಕರು ಕೊಲೆ ಮಾಡಿದ್ದರು. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 427, 449, 302, 506(2) ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ನ್ಯಾಯಾಲಕ್ಕೆ ಪೊಲೀಸರು ದೋಷಾರೋಪಣೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಲಯವು ಶಿವಪ್ಪ ರಾಠೋಡ್, ರವಿಕುಮಾರ್ ರಾಠೋಡ್, ರಮೇಶ್ ರಾಠೋಡ್ ಹಾಗೂ ಸಾರಿಗೆ ಇಲಾಖೆ ಚಾಲಕನಾಗಿರುವ ಪರಶುರಾಮ್ ರಾಠೋಡ್ ಮೇಲಿನ ಅಪರಾಧ ಸಾಭಿತಾದ ಹಿನ್ನೆಲೆ ಬುಧವಾರ ಮರಣದಂಡನೆ ವಿಧಿಸಿ ಆದೇಶಿಸಿದೆ.
Post a Comment