-->
Bookmark

Gadag : ೨೦, ೨೧ ಜಿಲ್ಲಾ ಸಾಹಿತ್ಯ ಸಮ್ಮೇಳನ, ವ್ಯವಸ್ಥಿತವಾಗಿ ಜರುಗಲಿ: ಸಚಿವ ಹೆಚ್ ಕೆ ಪಾಟೇಲ್

Gadag : ಇದೇ ೨೦, ೨೧ ಗಜೇಂದ್ರಗಡ ಪಟ್ಟಣದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ, ವ್ಯವಸ್ಥಿತವಾಗಿ ಜರುಗಲಿ: ಸಚಿವ ಹೆಚ್ ಕೆ ಪಾಟೇಲ್

ಗದಗ : (Jan_13_2025)

"ಜನೆವರಿ ೨೦, ೨೧ ರಂದು ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಜರುಗುವ ಜಿಲ್ಲಾ ಸಾಹಿತ್ಯ ಸಮ್ಮೇಳನ ಅತ್ಯಂತ ವ್ಯವಸ್ಥಿತವಾಗಿ ಜರುಗಲಿ. ಕನ್ನಡದ ಕಂಪು ಜಿಲ್ಲೆಯಲ್ಲೇಡೆ ಪಸರಿಸಲಿ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಹೇಳಿದರು.

ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಚನವನ್ನು ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ ಪಾಟೀಲ ಬಿಡುಗಡೆ ಮಾಡಿ ಮಾತನಾಡಿದರು.

"ಗದಗ ಜಿಲ್ಲೆಯ ಸಾಹಿತ್ಯ ಸಮ್ಮೇಳನದ ಮೂಲಕ ಜನಸಾಮಾನ್ಯರಿಗೂ ಸಹ ನಾಡಿನ ಜಿಲ್ಲೆಯ ಸಾಹಿತ್ಯ ಸಂಸ್ಕೃತಿಯ ಪರಿಚಯ ಅರಿವು ಆಗಬೇಕು. ಈ ಮೂಲಕ ನಮ್ಮ ಗದಗ ಜಿಲ್ಲೆಯ ಐತಿಹಾಸಿಕ ಪರಂಪರೆಯ ಅರಿವು ಮೂಡಬೇಕು. ಒಟ್ಟಾರೆ ಸಾಹಿತ್ಯ ಸಮ್ಮೇಳನದ ಮೂಲ ಆಶಯ ಇಡೇರಬೇಕು" ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಹೇಳಿದರು.


ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ ಎಸ್ ಪಾಟೀಲ, ಮಾಜಿ ಶಾಸಕ ಡಿಆರ್ ಪಾಟೀಲ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿಬಿ ಅಸೋಟಿ, ತಾಲೂಕ ಅಧ್ಯಕ್ಷ ಅಶೋಕ್ ಮಂದಾಲಿ, ಸಿದ್ದು ಪಾಟೀಲ, ಎಸ್ ಎನ್ ಬಳ್ಳಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವಿವೇಕಾನಂದ ಗೌಡ ಪಾಟೀಲ, ಪರಿಷತ್ತಿನ ಪದಾಧಿಕಾರಿಗಳಾದ ಜಿಲ್ಲಾ ಗೌರವ ಕಾರ್ಯದರ್ಶಿ ಶಿವಾನಂದ ಗಿಡ್ನಂದಿ, ಕಿಶೋರ್ ಬಾಬು ನಾಗರಕಟ್ಟಿ, ಕೋಶಾಧ್ಯಕ್ಷ ಡಿ ಎಸ್‌ ಬಾಪುರಿ, ದತ್ತ ಪ್ರಸನ್ನ ಪಾಟೀಲ ಉಪಸ್ಥಿತರಿದ್ದರು.


ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ, ಡಿ ವೈ ಎಸ್ ಪಿ ವಿದ್ಯಾನಂದ ನಾಯ್ಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್ ಎಸ್ ಬುರಡಿ,ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮತ್ತೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.

Post a Comment

Post a Comment