ಗಜೇಂದ್ರಗಡ : (Jan_16_2024)
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಶಿಕ್ಷಕಿ ಅನ್ನಪೂರ್ಣ ರಾಠೋಡ್ ಅವರ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ. 14 ವರ್ಷದ ಖುಷಿ ರಂಗ್ರೇಜ್ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮನೆಯಲ್ಲೆ ನೇಣಿಗೆ ಶರಣಾಗಿದ್ದಾರೆ. ಮೊನ್ನೆ ಶಾಲೆಗೆ ತೆರಳಿ ತರಗತಿಯಲ್ಲಿ ವಿದ್ಯಾರ್ಥಿನಿ ಹಾಜರಾಗಿದ್ದಾರೆ ಎನ್ನಲಾಗಿದೆ. ಯುವತಿ ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಆದ್ರೆ, ಇದು ಲವ್ ಜೀಹಾದ್ ಪ್ರಕರಣ ಎಂಬ ಆರೋಪಗಳು ಕೇಳಿ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಲವ್ ಜೀಹಾದ್ ಪ್ರಕರಣಗಳು ಹೆಚ್ಚಾಗಿವೆ ಎಂದು ಹಿಂದುಪರ ಸಂಘಟನೆಗಳು ಆರೋಪಿಸಿವೆ.
Post a Comment