ಗಜೇಂದ್ರಗಡ : (Mar_30_2025)
ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಉಚ್ಚಾಟಿಸಿರುವುದು ಕಮಲ ಪಾಳಯಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ರಾಜ್ಯಾದ್ಯಂತ ಪಂಚಮಸಾಲಿ ಸಮಾಜ ಯತ್ನಾಳ್ ಅವರ ಉಚ್ಚಾಟನೆಯನ್ನ ಖಂಡಿಸಿ, ಪ್ರತಿಭಟನೆಯನ್ನು ಸಹ ಮಾಡುತ್ತಿವೆ. ಅದರಂತೆ ಗಜೇಂದ್ರಗಡ ಪಟ್ಟಣದಲ್ಲೂ ಪಂಚಮಸಾಲಿ ಸಮಾಜ ಪ್ರತಿಭಟನೆ ನಡೆಸಲು ಮುಂದಾಗಿದೆ. ಯತ್ನಾಳ್ ಅವರ ಉಚ್ಚಾಟನೆ ಹಿಂಪಡೆಯಬೇಕೆಂದು ಆಗ್ರಹಿಸಲು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ಸಿದ್ದಪ್ಪ ಬಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಪ್ರಿಲ್ 1 ರಂದು ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ, ಉಚ್ಚಾಟನೆ ಆದೇಶ ಹಿಂಪಡೆಯಿರಿ ಎಂದು ಆದೇಶ ಹೊರಡಿಸಲು ಮತ್ತು ಬಿಜೆಪಿ ಹಿರಿಯ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಬೇಕೆಂದು ಪಂಚಮಸಾಲಿ ಸಮಾಜ ಬಾಂಧವರಿಗೆ ಸಿದ್ದಪ್ಪ ಬಂಡಿ ಮನವಿ ಮಾಡಿದ್ದಾರೆ.
Post a Comment