-->
Bookmark

New Delhi : ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದಿಂದ 6 ವರ್ಷ ಉಚ್ಚಾಟನೆ

New Delhi : ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದಿಂದ 6 ವರ್ಷ ಉಚ್ಚಾಟನೆ 

ನವದೆಹಲಿ: (Mar_26_2025)
ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ವಿಷಯವನ್ನು ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂಪಾಠಕ್ ಖಚಿತಪಡಿಸಿದ್ದಾರೆ.

ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್ ನೀಡಿತ್ತು. ನೋಟಿಸ್‌ ನೀಡಿದ್ದರೂ, ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ಯತ್ನಾಳ್‌ ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಠಾವೋ ಎಂದು ಭಿನ್ನಮತಿಯರು ಹೇಳುತಿದ್ದರು. ಪಕ್ಷದ ವಿಚಾರವನ್ನು ಹೊರಗಡೆ ಚರ್ಚಿಸಬೇಡಿ ಎಂದು ಬಿಜೆಪಿ ಸೂಚಿಸುತ್ತಿದ್ದರೂ, ನಾಯಕರು ಪದೇ ಪದೇ ಶಿಸ್ತು ಉಲ್ಲಂಘನೆ ಮಾಡುತ್ತಿದ್ದಾರೆ.

ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾ.26 ರಂದು ಎಸ್‌ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಪಿ ಹರೀಶ್, ರೇಣುಕಾಚಾರ್ಯಗೆ ಶೋಕಾಸ್‌ ನೋಟಿಸ್‌ ನೀಡಿತ್ತು.
Post a Comment

Post a Comment